ಬೆಂಗಳೂರು, ಜೂ29(Daijiworld News/SS): ಆದಾಯ ತೆರಿಗೆ ಇಲಾಖೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ನೀಡಿದೆ.
2017ರ ಆಗಸ್ಟ್ 2ರಂದು ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಸಚಿವ ಡಿ.ಕೆ ಶಿವಕುಮಾರ್ ಪೇಪರ್ ಒಂದನ್ನು ಹರಿದು ನುಂಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಐಟಿ ಕೇಸ್ ದಾಖಲಿಸಿತ್ತು.
ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಐಟಿ ದಾಖಲಿಸಿದ್ದ ಖಾಸಗಿ ದೂರನ್ನು ‘ಜನಪ್ರತಿನಿಧಿಗಳ ಕೋರ್ಟ್’ ವಿಚಾರಣೆ ನಡೆಸಿ ಕ್ಲೀನ್ಚಿಟ್ ಕೊಟ್ಟಿತ್ತು. ಇದನ್ನು ಪ್ರಶ್ನಿಸಿ ಐಟಿ ಇಲಾಖೆ ಹೈಕೋರ್ಟ್ ಮೆಟ್ಟಿಲೇರಿತ್ತು. ಶುಕ್ರವಾರ ವಿಚಾರಣೆ ನಡೆಸಿದ ಹೈಕೋರ್ಟ್ ಡಿ.ಕೆ.ಶಿವಕುಮಾರ್ಗೆ ನೋಟಿಸ್ ಜಾರಿ ಮಾಡಲು ಆದೇಶ ನೀಡಿದೆ.
2017ರ ಆಗಸ್ಟ್ನಲ್ಲಿ ಈಗಲ್ಟನ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರು ರೆಸಾರ್ಟ್ನಲ್ಲಿದ್ದರು.