ಕಿಶ್ತ್ವಾರ್, ಜು 01 (Daijiworld News/MSP): ಮಿನಿ ಬಸ್ ಕಂದಕಕ್ಕೆ ಉರುಳಿ ಸುಮಾರು 33 ಜನ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 22 ಮಂದಿಗೆ ಗಂಭೀರ ಗಾಯಗಳಾಗಿದೆ.
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಕೇಶ್ವಾನದಿಂದ ಕಿಶ್ತ್ವಾರ್ ಕಡೆಗೆ ಪ್ರಯಾಣಿಸುತ್ತಿದ್ದು. ಈ ಸಂದರ್ಭ ಗೊರ್ಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತರದಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಮುಂಜಾನೆ 8.40ಕ್ಕೆ ಅಪಘಾತ ನಡೆದಿದ್ದು, ಸ್ಥಳೀಯರ ಸಹಕಾರದೊಂದಿಗೆ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.