ನವದೆಹಲಿ, ಜು 01 (Daijiworld News/MSP): ಅಡುಗೆ ಅನಿಲ ಬೆಲೆ ಭಾನುವಾರ ಮಧ್ಯರಾತ್ರಿಯಿಂದ ಕಡಿಮೆ ಆಗಲಿದ್ದು, ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 100 ರೂ. ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗುತ್ತಿರುವ ಹಿನ್ನೆಲೆ ಎಲ್ಪಿಜಿ ದರದಲ್ಲೂ ಇಳಿಕೆಯಾಗಿದೆ.
ಸಬ್ಸಿಡಿರಹಿತ ಅಥವಾ ಮಾರುಕಟ್ಟೆಯಲ್ಲಿನ ಎಲ್ಪಿಜಿ ಸಿಲಿಂಡರ್ ದರ 737.50 ಯಿಂದ 637ಕ್ಕೆ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಒಸಿ) ತಿಳಿಸಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಅನಿಲ ದರಗಳು ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಇನ್ನು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ ತಿಳಿಸಿದೆ.