ನವದೆಹಲಿ, ಅ. 25 (DaijiworldNews/AA): ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಅ.27ರ ಹೊತ್ತಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮುಂದಿನ ಎರಡು-ಮೂರು ದಿನಗಳ ಕಾಲ ಚೈನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಇಂದು ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ನಾಳೆ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ. ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.28ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್ನ ಮೊಂಥಾ ಎಂಬ ಹೆಸರು ಇಡಲಾಗಿದೆ. ಅ.27ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.