ಸತಾರಾ, ಅ. 26 (DaijiworldNews/AA): ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸಬ್-ಇನ್ಸ್ಪೆಕ್ಟರ್ ಗೋಪಾಲ್ ಬದನೆ ಅವರನ್ನು ಬಂಧಿಸಲಾಗಿದೆ.
ಬದನೆ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣ ದಾಖಲಾಗಿದ್ದು, ನಂತರ ಬದನೆ ತಲೆಮರೆಸಿಕೊಂಡಿದ್ದರು. ಬದನೆ ಫಲ್ಟನ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶರಣಾದರು, ನಂತರ ಅವರನ್ನು ಬಂಧಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
28 ವರ್ಷದ ವೈದ್ಯೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಸಾಫ್ಟ್ವೇರ್ ಇಂಜಿನಿಯರ್ ಪ್ರಶಾಂತ್ ಬಂಕರ್ ಅವರನ್ನು ಬಂಧಿಸಿದ್ದರು. ಮೃತರು ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಬೀಡ್ ಜಿಲ್ಲೆಯ ನಿವಾಸಿಯಾಗಿದ್ದು, ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಫಾಲ್ಟನ್ ಪಟ್ಟಣದ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯೆಯ ಮೃತದೇಹ ಪತ್ತೆಯಾಗಿದೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ್ ಬದನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಮತ್ತು ಬಂಕರ್ ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂದು ಬರೆಯಲಾಗಿತ್ತು ಎಂದು ಮೃತ ವೈದ್ಯೆಯ ಅಂಗೈಯಲ್ಲಿ ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ಗಂಭೀರ ಆರೋಪಗಳನ್ನು ಮಾಡಲಾಗಿತ್ತು.
ಫಾಲ್ಟನ್ನಲ್ಲಿ ಇಬ್ಬರೂ ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ. ಬಂಕರ್ ವೈದ್ಯೆ ವಾಸಿಸುತ್ತಿದ್ದ ಮನೆಯ ಮಾಲೀಕರ ಮಗ. ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಬದನೆ ಹೆಸರು ಕಾಣಿಸಿಕೊಂಡ ನಂತರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.