ತುಮಕೂರು, ಅ. 26 (DaijiworldNews/AA): ಸಂಪುಟ ಪುನಾರಚನೆ ಯಾರು ಮಾಡುತ್ತಾರೋ ಅವರೇ ಸಿಎಂ ಆಗಲಿದ್ದಾರೆ ಅಥವಾ ಮುಂದುವರಿಯಲಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, "ಸಿಎಂ ಸಿದ್ದರಾಮಯ್ಯರಿಗೆ ಸಂಪುಟ ಪುನಾರಚನೆ ಮಾಡಲು ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯೋದು ಖಚಿತ. ಇಲ್ಲ ಅಂದರೆ ರಾಜಕೀಯದಲ್ಲಿ ಯಾವುದೇ ಬೆಳವಣಿಗೆ ನಡೆಯಬಹುದು" ಎಂದು ಹೇಳಿದ್ದಾರೆ.
"ಎಲ್ಲವೂ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ನಡೆಯಲಿದೆ. ಅಲ್ಲಿಯವರೆಗೂ ಯಾವುದೇ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯರೇ ಮುಂದುವರಿಯಬಹುದು" ಎಂದರು.
"ಸಂಪುಟ ಪುನಾರಚನೆ ಆಗಲಿದೆ. ಇನ್ಮುಂದೆ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಮೀಸಲಾತಿ ಇರುವಂತೆ. ಓಬಿಸಿಗಳಿಗೆ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಮೀಸಲಾತಿ ಕೊಡಬೇಕು. ಎಸ್ಸಿ-ಎಸ್ಟಿ ಮೀಸಲು ಕ್ಷೇತ್ರ ಇರುವಂತೆ ಓಬಿಸಿ ಮೀಸಲು ಕ್ಷೇತ್ರ ಕೊಡಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು" ಎಂದು ಒತ್ತಾಯಿಸಿದರು.