ಬೆಂಗಳೂರು, ಜು02(Daijiworld News/SS): ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆಗೆ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಆಪರೇಷನ್ ಕಮಲ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಕಳೆದ ಮೂರು ತಿಂಗಳಿನಿಂದ ಅವರು ಅದನ್ನೇ ಹೇಳುತ್ತಿದ್ದಾರೆ. ತಮ್ಮ ಗೊಂದಲ ಮುಚ್ಚಿಹಾಕಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ರಿವರ್ಸ್ ಆಪರೇಷನ್ ಮಾಡುವುದಾದರೆ ಮಾಡಲಿ ಎಂದು ಹೇಳಿದರು.
ರಾಜ್ಯ ಸರ್ಕಾರ ಅಧಿವೇಶನ ನಡೆಸಿದರೆ ಅಲ್ಲಿ ವಿಶ್ವಾಸಮತ ಯಾಚನೆಯ ಪ್ರಶ್ನೆಯೇ ಇಲ್ಲ. ಈ ಬೆಳವಣಿಗೆಗಳನ್ನು ನೋಡಿಕೊಂಡು ಸಭೆ ಕರೆಯಬೇಕು. ಶಾಸಕಾಂಗ ಸಭೆಯಲ್ಲಿ ಯಾವ ಸಂಗತಿಗಳನ್ನು ಚರ್ಚಿಸಬೇಕೋ ಅವುಗಳ ಬಗ್ಗೆ ಮಾತನಾಡುತ್ತೇವೆ. ಸದನದಲ್ಲಿ ಯಾವ ಮುಖ್ಯ ವಿಚಾರವೋ ಅದನ್ನು ಚರ್ಚಿಸುತ್ತೇವೆ ಎಂದು ಹೇಳಿದರು.