ಜೈಪುರ್, ನ. 01 (DaijiworldNews/AA): ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇರೆಗೆ 3 ಮೌಲ್ವಿಗಳು ಸೇರಿದಂತೆ ಐವರು ಶಂಕಿತ ಭಯೋತ್ಪಾದಕರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ.

ಅಯೂಬ್, ಮಸೂದ್ ಮತ್ತು ಉಸ್ಮಾನ್ ಬಂಧಿತ ಮೌಲ್ವಿಗಳು. ಇನ್ನೂ ಕರೌಲ್ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ.
ಬಂಧಿತರಲ್ಲಿ ಒಬ್ಬನಾದ ಜೋಧ್ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್ನಿಂದ ಕೆಲವು ದಾಖಲೆಗಳನ್ನು ಎಟಿಎಸ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ ಮಾಡುತ್ತಿದ್ದ. ಇನ್ನೂ ಮದರಸಾದ ಉಳಿದ ಶಿಕ್ಷಕರು ಉಗ್ರರಿಗೆ ಸಹಕರಿಸುವ ಚಟುವಟಿಕೆ ನಡೆಸುತ್ತಿದ್ದಾರೆಯೇ ಎಂಬ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ.
ಎಟಿಎಸ್ ಅಧಿಕಾರಿಗಳು ಆರೋಪಿಯ ಮನೆಯಿಂದ 3 ಮೊಬೈಲ್ಗಳನ್ನು ಹಾಗೂ ಮನೆಯಲ್ಲಿ ಆರೋಪಿ ನಿರ್ಮಿಸಿದ್ದ ಗ್ರಂಥಾಲಯದಿಂದ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಆತನ ರೂಮ್ನ್ನು ಅಧಿಕಾರಿಗಳು ಸೀಲ್ ಮಾಡಿದ್ದಾರೆ.
ಉಳಿದಂತೆ ಜೋಧ್ಪುರ್, ಬಾರ್ಮರ್ ಮತ್ತು ಕರೌಲಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಎಟಿಎಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಧಿತರನ್ನು ಜೈಪುರದ ಎಟಿಎಸ್ ಪ್ರಧಾನ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರ ವಹಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.