ಬೆಂಗಳೂರು, ನ. 22 (DaijiworldNews/AK):ರಾಜ್ಯ ರಾಜಕೀಯದಲ್ಲಿನ ಕುರ್ಚಿ ಕಿತ್ತಾಟದ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಣ ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಸಿಎಂ ಭೇಟಿಗೂ ಮುನ್ನ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರ ರವಾನಿಸಿದೆ. ಈಗ ಪರಿಸ್ಥಿತಿ ಸರಿ ಇಲ್ಲದಿರೋದ್ರಿಂದ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳೋದಾಗಿ ಹೇಳಿದೆ. ಅಗತ್ಯಬಿದ್ದರೆ, ಇಬ್ಬರನ್ನೂ ದೆಹಲಿಗೆ ಕರೆಸಿಕೊಳ್ಳೋದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.