ಬೆಂಗಳೂರು, ಡಿ. 02 (DaijiworldNews/AA): ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾವು ಹಲವು ವಿಚಾರಗಳ ಬಗ್ಗೆ ಇಬ್ಬರು ಮಾತನಾಡಿದ್ದೇವೆ. ನಾವು ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದೇ ಡಿ.8 ರಿಂದ ಅಧಿವೇಶನ ಇರುವುದರಿಂದದ ನಮ್ಮ ರಣ ನೀತಿ ಹೇಗಿರಬೇಕು ಎನ್ನುವುದರ ಬಗ್ಗೆ ಮಾತನಾಡಿದ್ದೇವೆ" ಎಂದು ಹೇಳಿದರು.
"ನಾವು ಹಿಂದೆಯೂ ಒಗ್ಗಟ್ಟಾಗಿದ್ದೆವು, ಈಗಲೂ ಒಗ್ಗಟ್ಟಾಗಿದ್ದೇವೆ. ನಮ್ಮಿಬ್ಬರದ್ದು ಒಂದೇ ಸಿದ್ಧಾಂತ. 2028ಕ್ಕೆ ಮತ್ತೆ ನಾವು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಬಿಜೆಪಿಯವರು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸೋದಾಗಿ ಹೇಳಿದ್ದಾರೆ. ಅವರು ಏನೇ ವಿಚಾರ ಪ್ರಸ್ತಾಪ ಮಾಡಿದರೂ ನಾವು ಒಟ್ಟಾಗಿ ಎದುರಿಸುತ್ತೇವೆ ಎಂದು ಹೇಳಿದರು. ಡಿ.8 ರಂದು ಸಂಸದರ ಸಭೆ ಇರುವ ಕಾರಣ ದೆಹಲಿಗೆ ನಾವು ಹೋಗುತ್ತೇವೆ. ಸಮಯ ಸಿಕ್ಕಿದರೆ ಹೈಕಮಾಂಡ್ ಕರೆದರೆ ಭೇಟಿ ಮಾಡುತ್ತೇವೆ" ಎಂದರು.