ಶಿವಮೊಗ್ಗ, ಜು05(Daijiworld News/SS): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜು.04ರ ರಾತ್ರಿ ವೇಳೆ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು ಶಿವಮೊಗ್ಗದ ಖಾಸಗಿ ಶಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ.
ಸದ್ಯದ ಮಾಹಿತಿಯಂತೆ ಮಾಜಿ ಸಚಿವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.