ಬೆಂಗಳೂರು, ಜು 05 (Daijiworld News/SM): ಶುಕ್ರವಾರ ಮಂಡನೆಯಾದ ಕೇಂದ್ರ ಬಜೆಟನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್ ಜನತೆ ಇಟ್ಟುಕೊಂಡಿದ್ದ ನಿರೀಕ್ಷೆಯನ್ನು ಹುಸಿಕೊಳಿಸಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಬಜೆಟ್ ಮಂಡನೆ ಮಾಡಿದರು. ಆದರೆ, ಅಮೇರಿಕಾ ಪ್ರವಾಸದಲ್ಲಿರು ಸಿಎಂ ಕುಮಾರಸ್ವಾಮಿ ಈ ಬಜೆಟ್ ಬಗ್ಗೆ ಟ್ವೀಟರ್ ಮೂಲಕ ನಿರಂತರ ಟೀಕೆಗಳನ್ನೇ ಮಾಡಿದ್ದಾರೆ.
ನಮ್ಮ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡುವರೆಂದು ನಿರೀಕ್ಷಿಸಿದ್ದೆವು. ಈ ನಿಟ್ಟಿನಲ್ಲಿ ಯಾವುದೇ ಘೋಷಣೆ ಮಾಡದಿರುವುದು ನಿರಾಶೆ ತಂದಿದೆ' ಎಂದು ಸಿಎಂ ಹೆಚ್ ಡಿಕೆ ಟ್ವೀಟ್ ಮಾಡಿದ್ದಾರೆ.
'ಪೆಟ್ರೋಲ್, ಡೀಸೆಲ್ ಗಳ ಮೇಲೆ ಸೆಸ್ ಏರಿಕೆ ಮಾಡಿರುವುದರಿಂದ ರಾಜ್ಯವು ಇಂಧನ ಮೇಲೆ ಸೆಸ್ ವಿಧಿಸಲು ಅವಕಾಶ ಕಡಿಮೆ ಮಾಡಿದಂತಾಗಿದೆ. ಅಲ್ಲದೆ, ಇಂಧನ ಬೆಲೆ ಏರಿಕೆಯಿಂದ ಪ್ರತಿಯೊಬ್ಬರಿಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊರೆಯಾಗಲಿದೆ' ಎಂದು ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.