ನವದೆಹಲಿ, ಜು06(Daijiworld News/SS): ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಹೆಚ್ಚಿಸಿದ್ದು, ಇದರ ಪರಿಣಾಮ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಏರಿಕೆಯಾಗಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರವು ಜನಸಾಮಾನ್ಯರ ಪ್ರಯಾಣದ ಹೊರೆಯನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಕೇಂದ್ರ ಬಜೆಟ್'ನಲ್ಲಿ ಸೆಸ್ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 2.5 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್ 2.3 ರೂ. ಏರಿಕೆಯಾಗಿದೆ. ಇದರಿಂದ ಈಗಾಗಲೇ ಗರಿಷ್ಠ ಮಟ್ಟದಲ್ಲಿರುವ ಇಂಧನ ದರ ಮತ್ತಷ್ಟು ಏರಿಕೆಯಾಗಲಿದೆ.
ಕಚ್ಚಾ ತೈಲ ದರ ಇಳಿಮುಖವಾಗಿರುವುದರಿಂದ ತೆರಿಗೆ ದರ ಪರಿಷ್ಕರಣೆಗೆ ಅವಕಾಶ ದೊರೆತಿದೆ ಎಂದು ತಮ್ಮ ನಿರ್ಧಾರವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ನಲ್ಲಿ ಸಂಗ್ರಹಗೊಂಡ ಹಣವನ್ನು ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು 2019-2020ನೇ ಸಾಲಿನ ಬಜೆಟ್ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿದ್ದು, ಇದರಿಂದ 28 ಸಾವಿರ ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿದೆ.
ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ದರಲೀಟರ್ಗೆ ರೂ 72.83 ಇದ್ದು, ಡೀಸೆಲ್ ದರ 66.45 ರೂ. ಇದೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಲೀಟರ್ ಪೆಟ್ರೋಲ್ ದರ 72.51 ರೂ. ಮತ್ತು ಡೀಸೆಲ್ ದರ 66.33 ರೂ. ಇದೆ. ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್ ದರ 73.19 ರೂ. ಮತ್ತು ಡೀಸೆಲ್ ದರ 67.96 ರೂ. ಇದೆ. ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಪೆಟ್ರೋಲ್ ದರ 72.75 ರೂ. ಮತ್ತು ಡೀಸೆಲ್ ದರ 66.23 ರೂ. ಇದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ ಪೆಟ್ರೋಲ್ ದರ 76.15 ರೂ. ಮತ್ತು ಡೀಸೆಲ್ ದರ 67.40 ರೂ. ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ಗೆ ರೂ. 3944 ಕ್ಕೆ ತಲುಪಿದೆ.