ಬೆಂಗಳೂರು, ಜು 06 (Daijiworld News/MSP): ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನ 8 ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.
ಈ ಪಟ್ಟಿಯಲ್ಲಿ ಬೆಂಗಳೂರಿನ ಐವರು ಶಾಸಕರ ಹೆಸರೂ ಇದೆ ಎಂಬುದಾಗಿ ತಿಳಿದುಬಂದಿದೆ. ಹೀಗಾಗಿ ಶಾಸಕರು ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ.
ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್, ಜೆಡಿಎಸ್ ನ ಎಚ್.ವಿಶ್ವನಾಥ್ ಹಾಗೂ ಗೋಪಾಲಯ್ಯ ಹಾಗೂ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ, ಮಹೇಶ್ ಕುಮಟಳ್ಳಿ ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. ಇವರೆಲ್ಲರೂ ಇಂದು ರಾಜಿನಾಮೆ ನೀಡುತ್ತಾರೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ರಾಮಲಿಂಗಾ ರೆಡ್ಡಿ ಮತ್ತು ಅವರ ಪುತ್ರ ಸೌಮ್ಯ ರೆಡ್ಡಿ ಮತ್ತು ಶಾಸಕ ಭೀಮಾ ನಾಯ್ಕ ಕೂಡಾ ರಾಜೀನಾಮೆಗೆ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.