ಬೆಂಗಳೂರು, ಜು 06 (Daijiworld News/MSP): ರಾಜ್ಯ ರಾಜಕಾರಣದಲ್ಲಿ ನಡೆದ ದಿಢೀರ್ ಬೆಳವಣಿಗೆಗಳ ಹಿನ್ನಲೆಯಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಈಗಾಗಲೇ ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆಯ ಅಸ್ತ್ರ ಪ್ರಯೋಗಿಸಿರುವ ಕಾಂಗ್ರೆಸ್-ಜೆಡಿಎಸ್ನ 11 ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಕಚೇರಿಯಲ್ಲಿ ತಮ್ಮ ರಾಜೀನಾಮೆ ನೀಡಿದ್ದಾರೆ.
ಈ ನಡುವೆ 8 ಜನ ರಾಜಭವನಕ್ಕೆ ತೆರಳಿ ರಾಜ್ಯಪಾಲನ್ನ ಭೇಟಿಯಾಗಿದ್ದು ಅಲ್ಲಿಂದ ನೇರವಾಗಿ ಬಿಗಿ ಭದ್ರತೆಯೊಂದಿಗೆ ಹೆಚ್.ಎ.ಎಲ್ ಏರ್ ಪೋರ್ಟ್ ನತ್ತ ತೆರಳಿದ್ದಾರೆ.
ಇವರೆಲ್ಲಾ ಶಾಸಕರು ಮುಂಬೈಗೆ ಶಿಫ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಅತೃಪ್ತ ಶಾಸಕರಾದ ಪ್ರತಾಪ್ ಗೌಡ ಪಾಟೀಲ್, ಬಿ.ಸಿ ಪಾಟೀಲ್, ರಮೇಶ್ ಜಾರಕಿಹೊಳಿ, ಶಿವರಾಮ್ ಹೆಬ್ಬಾರ್, ಮಹೇಶ್ ಕುಮಟಳ್ಳಿ, ರಾಮಲಿಂಗಾ ರೆಡ್ಡಿ, ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜ್, ಗೋಪಾಲಯ್ಯ, ಹೆಚ್. ವಿಶ್ವನಾಥ್, ನಾರಾಯಣ ಗೌಡ ಮುಂಬೈಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.