ದೆಹಲಿ, ಡಿ. 10 (DaijiworldNews/AK):ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ ಕೇಂದ್ರ ಸರ್ಕಾರವನ್ನ ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಮಾನ ಪ್ರಯಾಣ ದರ 40 ಸಾವಿರ ಆಗಲು ಹೇಗೆ ಸಾಧ್ಯ? ಅದನ್ನ ತಡೆಯಲು ಯಾಕೆ ಆಗಲಿಲ್ಲ ಎಂದು ಪ್ರಶ್ನೆ ಮಾಡಿರುವ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಪ್ರಶ್ನೆ ಮಾಡಿದ್ದಾರೆ.

ಬಿಕ್ಕಟ್ಟು ಸಂದರ್ಭದಲ್ಲಿ ಇತರ ವಿಮಾನಯಾನ ಸಂಸ್ಥೆಗಳಿಗೆ ಲಾಭ ಪಡೆಯಲು ಹೇಗೆ ಅನುಮತಿಸಬಹುದು? ಅದು 35-40 ಸಾವಿರ ಹಣ ಕೊಟ್ಟು ಹೇಗೆ ಹೋಗಲು ಸಾಧ್ಯ? ನೀವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಬಿಟ್ಟಿದ್ದೀರಿ. ಇಂತಹ ಪರಿಸ್ಥಿತಿಯು ಪ್ರಯಾಣಿಕರಿಗೆ ಅನಾನುಕೂಲತೆಯನ್ನು ಉಂಟುಮಾಡುವುದಕ್ಕೆ ಸೀಮಿತವಾಗಿಲ್ಲ. ಬದಲಾಗಿ ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ನಡೆ ಬಗ್ಗೆ ದೆಹಲಿ ಹೈಕೋರ್ಟ್ ತೀವ್ರ ಅಸಮಾಧಾನ ಹೊರ ಹಾಕಿದೆ.
ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿರುವ ನಡುವೆ ಉಳಿದ ಏರ್ಲೈನ್ಸ್ಗಳು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದವು. ಟಿಕೆಟ್ ದರವನ್ನು ಮನಬಂದಂತೆ ಏರಿಸಿದ್ದ ಪರಿಣಾಮ ದುಪ್ಪಟ್ಟು ಹಣ ಕೊಟ್ಟು ಪ್ರಯಾಣಿಸಬೇಕಾದ ಸ್ಥಿತಿ ಉದ್ಭವಿಸಿತ್ತು.