ಗಡ್ಚಿರೋಲಿ, ಡಿ. 10 (DaijiworldNews/AA): ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ 82 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ 11 ಹಿರಿಯ ನಕ್ಸಲೀಯರು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸುಕ್ಮಾ ಪೊಲೀಸ್ ಮಹಾನಿರ್ದೇಶಕ ರಶ್ಮಿ ಶುಕ್ಲಾ ಅವರ ಮುಂದೆ ನಕ್ಸಲೀಯರು ಶರಣಾಗಿದ್ದಾರೆ. ಡಿಜಿಪಿ ಮುಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದಾಗ ಅವರಲ್ಲಿ ನಾಲ್ವರು ಸಮವಸ್ತ್ರದಲ್ಲಿದ್ದರು. ರಾಜ್ಯ ಸರ್ಕಾರವು ಅವರಿಗೆ 82 ಲಕ್ಷ ರೂ. ಬಹುಮಾನವನ್ನು ಘೋಷಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಸಂಖ್ಯೆಯ ನಕ್ಸಲೀಯರು ಪೊಳ್ಳು ನಕ್ಸಲ್ ಸಿದ್ಧಾಂತದಿಂದ ಭ್ರಮನಿರಸನಗೊಂಡಿದ್ದು, ಜನರ ವಿರುದ್ಧ ಬುದ್ದಿಹೀನ ಹಿಂಸಾಚಾರದಿಂದ ಹತಾಶೆಗೊಂಡಿದ್ದಾರೆ. 2005 ರಿಂದ ಮಹಾರಾಷ್ಟ್ರ ಸರ್ಕಾರ ಜಾರಿಗೊಳಿಸಿದ ಶರಣಾಗತಿ ಮತ್ತು ಪುನರ್ವಸತಿ ನೀತಿಗೆ ಆಕರ್ಷಿತರಾಗಿದ್ದಾರೆ ಎನ್ನಲಾಗಿದೆ.