ಮುಂಬೈ, ಜು 10 (Daijiworld News/MSP): ಅತೃಪ್ತರ ಭೇಟಿಗೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಮುಂಬೈಗೆ ತೆರಳಿದ್ದು ಆದರೆ ಶಿವಕುಮಾರ್ ಅವರನ್ನು ಹೋಟೆಲ್ ಒಳಗೆ ಬಿಡಲು ಅಲ್ಲಿನ ಪೊಲೀಸರು ನಿರಾಕರಿಸಿದ್ದಾರೆ.
ಮುಂಬಯಿಯ ರಿನೈಸೆನ್ಸ್ ಹೋಟೆಲ್ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮನವೊಲಿಸಲು ಶಿವಕುಮಾರ್ ಮುಂಬೈಗೆ ತೆರಳಿದ್ದರು. ಆದರೆ ಅಲ್ಲಿನ ಪೊಲೀಸರು ಯಾರ ಹೆಸರಿನಲ್ಲಿ ರೂಂ ಬುಕ್ ಮಾಡಿದ್ದರೇ ಅವರಿಗೆ ಮಾತ್ರ ಒಳಪ್ರವೇಶಿಸಲು ಅನುಮತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಶಿವಕುಮಾರ್, ಬಿಜೆಪಿಯ ಆರ್. ಅಶೋಕ್ ಹಾಗೂ ಬೋಪಯ್ಯಗೆ ಅವರಿಗೆ ಮಾತ್ರ ಹೇಗೆ ಹೋಟೇಲ್ ಗೆ ಎಂಟ್ರಿ ಸಿಗುತ್ತೆ. ನಮ್ಮ ಬಳಿ ಯಾವುದೇ ಶಸ್ತ್ರಾಸ್ತ್ರವಿಲ್ಲ, ಕೇವಲ ಹೃದಯ ಮಾತ್ರ ಇದೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಮ್ಮ ಪಕ್ಷದ ಶಾಸಕರು ಉಳಿದುಕೊಂಡಿರುವ ಹೋಟೆಲ್ಗೆ ಮುಂಬೈ ಪೊಲೀಸ್ ಮತ್ತು ಇತರೆ ಯಾವುದೇ ಪಡೆಯನ್ನು ನಿಯೋಜನೆ ಮಾಡಲಿ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದಿಲ್ಲ. ನಾವು ನಮ್ಮ ಪಕ್ಷದ ಸ್ನೇಹಿತರನ್ನು ಭೇಟಿ ಮಾಡಲಷ್ಟೇ ಬಂದಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಒಳಗೆ ಬಿಡುತ್ತಿಲ್ಲ ಎಂದು ಶಿವಕುಮಾರ್ ತಿಳಿಸಿದ್ದಾರೆ.