ತಿರುವನಂತಪುರಂ, ಡಿ. 12 (DaijiworldNews/AK):ಕನ್ನಡ ಸೇರಿ ಬಹುಭಾಷೆಗಳಲ್ಲಿ ನಟಿಸಿರುವ ಮಲಯಾಳಂ ಮೂಲದ ನಟಿಯೊಬ್ಬರ ಮೇಲೆ 2017ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದ ಆದೇಶ ಹೊರಬಿದ್ದಿದೆ. ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿ 6 ಮಂದಿ ಆರೋಪಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೇರಳ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ನಟ ದಿಲೀಪ್ರನ್ನ ಕೋರ್ಟ್ ಖುಲಾಸೆ ಮಾಡಿದೆ. ಪ್ರಕರಣ ಸಂಬಂಧ ಡಿಸೆಂಬರ್ 8 ರಂದು ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ನ ನ್ಯಾಯಾಧೀಶರಾದ ಹನಿ ಎಂ. ವರ್ಗೀಸ್ ಅವರು ಪ್ರಕರಣದ ಇನ್ನೊಬ್ಬ ಆರೋಪಿ ಮಲಯಾಳಂ ನಟ ದಿಲೀಪ್ರನ್ನ ಅವರನ್ನ ಖುಲಾಸೆಗೊಳಿಸಿದ್ದರು.
ಪ್ರಕರಣದ ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್ ಪಲ್ಸರ್ ಸುನಿ , ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಕಾ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಪರಿಗಣಿಸಿ ಸಾಮೂಹಿಕ ಅತ್ಯಾಚಾರ ಕೃತ್ಯಕ್ಕಾಗಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತು. ಇದರೊಂದಿಗೆ ಎಲ್ಲಾ ಅಪರಾಧಿಗಳೂ 20 ಸಾವಿರ ರೂ. ದಂಡ ಕಟ್ಟಬೇಕು ಎಂದು ಕೋರ್ಟ್ ಹೇಳಿದೆ.
ಈ ಪ್ರಕರಣದಲ್ಲಿ ಮೊದಲ ಆರೋಪಿ ಎನ್.ಎಸ್. ಸುನಿಲ್ (ಪಲ್ಸರ್ ಸುನಿ). ಎರಡನೇ ಆರೋಪಿ ಮಾರ್ಟಿನ್ ಆಂಟೋನಿ, ಮೂರನೇ ಆರೋಪಿ ಬಿ. ಮಣಿಕಂದನ್, 4ನೇ ಆರೋಪಿ ವಿ.ಪಿ. ವಿಜೀಶ್, ಐದನೇ ಆರೋಪಿ ಎಚ್. ಸಲೀಂ, ಮತ್ತು ಆರನೇ ಆರೋಪಿ ಪ್ರದೀಪ್, 50 ಸಾವಿರ ರೂಪಾಯಿ ದಂಡ ಪಾವತಿಸದಿದ್ದರೆ, ಅವರು ಇನ್ನೂ 1 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ದಂಡದ ಮೊತ್ತದಿಂದ ಸಂತ್ರಸ್ಥೆಗೆ 5 ಲಕ್ಷ ರೂ.ಗಳನ್ನು ನೀಡಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಮೊದಲ ಆರೋಪಿ ಸುನಿಲ್ಗೆ ಐಟಿ ಕಾಯ್ದೆಯಡಿ ಹೆಚ್ಚುವರಿಯಾಗಿ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 20 ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ಇದನ್ನು ಅನುಭವಿಸಬೇಕಾಗುತ್ತದೆ.