ಬೆಂಗಳೂರು, ಜು 10 (Daijiworld News/MSP): ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಆನಂದ್ ಸಿಂಗ್ ರಾಜೀನಾಮೆಯಿಂದ ಶುರುವಾದ ಸಂಕಷ್ಟ ಬುಧವಾರವೂ ಮುಂದುವರಿದಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮತ್ತಿಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ.
ಮೈತ್ರಿ ಸರ್ಕಾರ ಪತನಗೊಳ್ಳುವ ಸೂಚನೆ ಸ್ಪಷ್ಟವಾಗುತ್ತಿದ್ದಂತೆ ಹೊಸಕೋಟೆಯ ಕಾಂಗ್ರೆಸ್ ಶಾಸಕ ಎಂ.ಟಿ.ಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುದಾಕರ್ ಸ್ಪೀಕರ್ ಕಚೇರಿಗೆ ಆಗಮಿಸಿದ್ದು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಶಾಸಕರಾದ ಸುಧಾಕರ್ ಹಾಗೂ ನಾಗರಾಜ್ ಅವರು ತಮ್ಮ ಕೈಬರಹದಲ್ಲಿ ರಾಜೀನಾಮೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಲ್ಲಿಸಿದ್ದು ಈ ವೇಳೆ ಇವರಿಬ್ಬರು " ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಹೇಳಿದ್ದಾರೆ.