ನವದೆಹಲಿ, ಡಿ. 15 (DaijiworldNews/AK):ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದು ಕೇಂದ್ರ ಸಚಿವ, ಸಂಸದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಮತಗಳ್ಳತನದ ವಿರುದ್ಧ ಕಾಂಗ್ರೆಸ್ ದೆಹಲಿಯಲ್ಲಿ ನಡೆಸಿರುವ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಪಕ್ಷದಲ್ಲಿ ಎಸ್ಐಆರ್ ನಡೆಸಬೇಕು, ಇದು ನಡೆಯುವವರೆಗೂ ಯಾವುದನ್ನೂ ಸರಿಪಡಿಸಲು ಸಾಧ್ಯವಿಲ್ಲ. ಮತಗಳ್ಳತನ ನಡೆದಿಲ್ಲ ರಾಹುಲ್ ಗಾಂಧಿ ಮತ್ತು ಅವರ ಬೆಂಬಲಿಗರ ಮೆದುಳು ಕಳ್ಳತನವಾಗಿದೆ ಎಂದು ವ್ಯಂಗ್ಯವಾಡಿದರು.
ದೇಶಾದ್ಯಂತ ಬಿಜೆಪಿಯಿಂದ ಮತಗಳ್ಳತನ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ‘ವೋಟ್ ಚೋರಿ’ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆದಿದ್ದು, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗವಹಿಸಿದ್ದಾರೆ.