ಶ್ರೀನಗರ, ಡಿ. 16 (DaijiworldNews/AA): ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಗಡಿ ಜಿಲ್ಲೆಯ ಟ್ರೆಹ್ಗಮ್ ಪ್ರದೇಶದ ಪುಟಾಹಾ ಖಾನ್ ಗಾಲಿಯಲ್ಲಿ ಸೋಮವಾರ ಈ ನೆಲಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಸೇನೆಯ ಜಮ್ಮು ಮತ್ತು ಕಾಶ್ಮೀರ ಲಘು ಪದಾತಿ ದಳದ ಹವಾಲ್ದಾರ್ ಜುಬೈರ್ ಅಹ್ಮದ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಗಾಯಗೊಂಡ ಸೈನಿಕನನ್ನು ಡ್ರಗ್ಮುಲ್ಲಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.