ರಾಂಚಿ, ಡಿ. 25 (DaijiworldNews/AA): ನಾಯಕತ್ವದ ಕುರಿತಾದ ಹೇಳಿಕೆಗಳು ಕಾಂಗ್ರೆಸ್ನ ಆಂತರಿಕ ವಿಷಯವಾಗಿದ್ದು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಪ್ರಧಾನಿ ಹುದ್ದೆಯನ್ನು ಅಲಂಕರಿಸಲು ಸಮರ್ಥರಾಗಿದ್ದಾರೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ವಕ್ತಾರ ಮನೋಜ್ ಪಾಂಡೆ ತಿಳಿಸಿದ್ದಾರೆ.

"ಇದು ಕಾಂಗ್ರೆಸ್ನ ಆಂತರಿಕ ವಿಷಯ. ಪ್ರಿಯಾಂಕಾ ಗಾಂಧಿ ಒಬ್ಬ ಸಮತೋಲಿತ ನಾಯಕಿ. ರಾಜಕೀಯದಲ್ಲಿ ಅಗತ್ಯವಿರುವ ಎಲ್ಲ ಗುಣಗಳನ್ನು ಅವರು ಹೊಂದಿದ್ದಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಪ್ರಧಾನಿ ಸ್ಥಾನಕ್ಕೆ ಅರ್ಹರು" ಎಂದರು.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು 'ಪ್ರಧಾನಿ'ಯಾಗಿ ಮಾಡೇ ಮಾಡ್ತೀವಿ, ಇಂದಿರಾಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಎಂಬುದನ್ನು ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ ಹೇಳಿದ್ದರು.
ಕಾಂಗ್ರೆಸ್ನಲ್ಲಿ ಆಂತರಿಕ ಪ್ರಕ್ಷುಬ್ಧತೆ ಇದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜನರು ಮತ್ತು ಪಕ್ಷದ ಸದಸ್ಯರ ಬೆಂಬಲವನ್ನು ಕಳೆದುಕೊಂಡಿದ್ದಾರೆ ಎಂದು ಮಂಗಳವಾರ ಬಿಜೆಪಿ ವಕ್ತಾರ ಶಹಜಾದ್ ಪೂನವಾಲಾ ತಿಳಿಸಿದ್ದರು.