ಭುವನೇಶ್ವರ್, ಡಿ. 25 (DaijiworldNews/AA): ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ.

ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಇನ್ನು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ 23 ತಂಡಗಳನ್ನು ರೂಪಿಸಲಾಗಿತ್ತು. 20 ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ), ಎರಡು ಸಿಆರ್?ಪಿಎಫ್ ತಂಡಗಳು ಮತ್ತು ಒಂದು ಬಿಎಸ್ಎಫ್ ತಂಡ ಹೀಗೆ ವಿವಿಧ ತಂಡಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿವೆ.
ಕಂಧಮಾಲ್ ಮತ್ತು ಗಂಜಾಮ್ ಜಿಲ್ಲೆಯ ವಿವಿಧ ಕಡೆ ಈ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದವು. ಈ ವೇಳೆ, ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಒಟ್ಟು ಐವರು ನಕ್ಸಲರು ಹತರಾಗಿದ್ದಾರೆ.