ಮೈಸೂರು, ಜು12(Daijiworld News/SS): ಸದ್ಯಕ್ಕೆ ಸರ್ಕಾರಕ್ಕೆ ಏನು ತೊಂದರೆ ಇಲ್ಲ. ಇದು ದೇವರು ಕೊಟ್ಟಿರುವ ಸರ್ಕಾರ. ದೇವರ ಆಶೀರ್ವಾದ ಇರುವವರೆಗೂ ಏನು ಆಗಲ್ಲ ಎಂದು ಸಚಿವ ಎಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಆಶೀರ್ವಾದ ಇರುವವರಗೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿರುತ್ತಾರೆ. ಚಾಮುಂಡೇಶ್ವರಿಯ ಅನುಗ್ರಹ ಕುಮಾರಸ್ವಾಮಿ ಮೇಲಿದೆ. ಸದ್ಯಕ್ಕೆ ಸರ್ಕಾರಕ್ಕೆ ಏನು ತೊಂದರೆ ಇಲ್ಲ. ಕುಮಾರಸ್ವಾಮಿಗೆ ಸರ್ಕಾರದ ಅವಶ್ಯಕತೆ ಇಲ್ಲ. ಆದರೆ, ರಾಜ್ಯದ ಜನತೆಗೆ ಕುಮಾರಸ್ವಾಮಿಯವರ ಅವಶ್ಯಕತೆ ಇದೆ. ಇಂದು ಕೂಡ ಸರ್ಕಾರಕ್ಕೆ ಏನು ಆಗಲ್ಲ ಎಂದು ಹೇಳಿದರು.
ರೇವಣ್ಣ, ಸಾ.ರಾ ಮಹೇಶ್ ಬಿಜೆಪಿ ನಾಯಕರನ್ನು ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಜತೆ ಅಧಿಕಾರ ಹಂಚಿಕೊಳ್ಳುವ ಬೆಳವಣಿಗೆ ಸದ್ಯಕ್ಕಿಲ್ಲ. ಇಂದಿನ ಅಧಿವೇಶನ ಕೂಡ ಸುಸೂತ್ರವಾಗಿ ನಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ರಾಜಕಾರಣ ಮತ್ತೊಂದು ಮಹತ್ವದ ಘಟ್ಟಕ್ಕೆ ಬಂದು ನಿಂತಿದೆ. ಇಂದಿನಿಂದ ವಿಧಾನಸೌಧದಲ್ಲಿ ಮುಂಗಾರು ಅಧಿವೇಷನ್ ಆರಂಭವಾಗುತ್ತದೆ. ಅಧಿವೇಷನದಲ್ಲಿ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಸಜ್ಜಾಗಿದೆ. ಮತ್ತೊಂದೆಡೆ ಶಾಸಕರ ರಾಜೀನಾಮೆ ಸರಣಿಯಿಂದ ಕಂಗೆಟ್ಟಿರುವ ಮೈತ್ರಿ ನಾಯಕರು ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನೀಡಲು ಸಜ್ಜಾಗಿದ್ದಾರೆ. ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ರಾಜ್ಯ ರಾಜಕಾರಣ ದೇಶದ ಗಮನ ಸೆಳೆದಿದೆ.