ಕಲಬುರಗಿ, ಜ. 11 (DaijiworldNews/AA): ಜೆಡಿಎಸ್ನವರು ತಮ್ಮ ಪಕ್ಷವನ್ನೇ ಮಾರಾಟಕ್ಕೆ ಇಟ್ಟಿದ್ದಾರೆ ಅಂತಹವರು ಸಿಎಂ ಲೀಸ್ ಪಿರಿಡ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸದ್ಯ ಜೆಡಿಎಸ್ ಪಕ್ಷವನ್ನ ಬಿಜೆಪಿ ಅಕ್ರಮ ಸಕ್ರಮವಾಗಿ ಮಾಡಿಕೊಂಡಿದ್ದಾರೆ. ಆದರೆ ಜೆಡಿಎಸ್ ನವರು ಸೇಲ್ ಡೀಡ್ ನಮ್ಮಕಡೆಯಿದೆ ಅಂತಾ ಕುಳಿತಿದ್ದಾರೆ" ಎಂದು ಹೇಳಿದ್ದಾರೆ.
"ಈಗಾಗಲೇ ಜೆಡಿಎಸ್ ಫ್ಲಾಟ್ ನಲ್ಲಿ ಬಿಜೆಪಿಯವರು ಬಹುಮಹಡಿ ಕಟ್ಟಡವನ್ನೇ ಕಟ್ಟಿದ್ದಾರೆ. ಕುಮಾರಸ್ವಾಮಿ ಹಿಂದೆ ಸಹ ರಾಜ್ಯ ರಾಜಕಾರಣದಲ್ಲಿದ್ರು ಆಗಲೂ ಏನೂ ಆಗಿಲ್ಲ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದೇ ಇಲ್ಲ" ಎಂದು ತಿಳಿಸಿದ್ದಾರೆ.