ಬೆಂಗಳೂರು, ಜು17(Daijiworld News/SS): ಚಂದ್ರಗ್ರಹಣ ಮೋಕ್ಷಕಾಲದ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗವಿಗಂಗಾಧರೇಶ್ವರನಿಗೆ ಪೂಜೆ ಸಲ್ಲಿಸಿ ರಮಡಾ ರೆಸಾರ್ಟ್ಗೆ ಹೋಗುತ್ತೇನೆ. ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬೀಳಲಿದೆ. ಅದರ ನಂತರ ಮಾತನಾಡುತ್ತೇನೆ ಎಂದು ಹೇಳಿದರು.
ನಾಳೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡುವುದಾಗಿ ತಿಳಿಸಿದ್ದಾರೆ. ಆದರೆ ಖಂಡಿತ ಸೋಲುತ್ತಾರೆ ಎಂಬ ವಿಶ್ವಾಸವಿದೆ. ನಾವು ಸರ್ಕಾರ ರಚಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.
ಅತೃಪ್ತ ಶಾಸಕರ ರಾಜೀನಾಮೆಗಳ ಸ್ವೀಕಾರ ವಿಷಯದಲ್ಲಿ ಸ್ಪೀಕರ್ ವಿರುದ್ಧ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಬೆಳಗ್ಗೆ 10:30ಕ್ಕೆ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರು ಸೇರಿದಂತೆ ಮೂರೂ ಪಕ್ಷಗಳಲ್ಲಿ ಒತ್ತಡ, ಆತಂಕ ಮನೆ ಮಾಡಿದೆ.