ಬೆಂಗಳೂರು,ಜ. 12 (DaijiworldNews/AK): ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ತಿಳಿಸಿದರು.

ಲೋಕಭವನದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಬಿಜೆಪಿ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿತು. ದ್ವೇಷ ಭಾಷಣ ಮಸೂದೆ ವಿರೋಧಿಸಿ ಮನವಿ ನೀಡಲಾಗಿದೆ ಎಂದರು. ಇದಕ್ಕೆ ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆಕ್ಷೇಪಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.