ಬೆಂಗಳೂರು, ಜು 18(Daijiworld News/RD): ಅತೃಪ್ತಗೊಂಡ ಕಾಗೆವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ತಮ್ಮ ಪಕ್ಷದ ಶಾಸಕರಿದ್ದ ರೆಸಾರ್ಟ್ನಲ್ಲಿದ್ದು ಬುಧವಾರ ರಾತ್ರಿ ನಾಪತ್ತೆಯಾಗಿದ್ದು ಗುರುವಾರ ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾಂಗ್ರೆಸ್ ಶಾಸಕರು ದೇವನಹಳ್ಳಿಯ ಪ್ರಕೃತಿ ರೆಸಾರ್ಟ್ನಲ್ಲಿದ್ದು, ಅವರ ಜೊತೆಗಿದ್ದ ಶ್ರೀಮಂತ ಪಾಟೀಲ್ ಬುಧವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇವರ ನಾಪತ್ತೆಗೆ ಸಂಬಂಧಪಟ್ಟಂತೆ ಸಾಕಷ್ಟು ವದಂತಿ ಕೇಳಿಬಂದಿದ್ದು. ಇವರು ಮುಂಬೈ ರೆಸಾರ್ಟ್ಲ್ಲಿರುವ ಅತೃಪ್ತ ಶಾಸಕರ ಜೊತೆ ಸೇರಿರುವ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದವು.
ಆದರೆ ಈ ಎಲ್ಲಾ ಊಹಾಪೋಹಗಳಿಗೆ ತಿರುವು ನೀಡುವಂತೆ ಶ್ರೀಮಂತ ಪಾಟೀಲ್ ಎದೆನೋವಿಗೆ ಚಿಕಿತ್ಸೆ ಪಡೆಯುವುದಕ್ಕಾಗಿ ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅಧಿವೇಶನ ನಡೆಯುತ್ತಿದ್ದು, ಪ್ರಮುಖ ಮೂರೂ ಪಕ್ಷಗಳು ಶಾಸಕರು ಸದನಕ್ಕೆ ಹಾಜರಿರುವಂತೆ ವಿಪ್ ಜಾರಿ ಮಾಡಿವೆ. ಹಾಗಾಗಿ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆ ನೋವಿಗೆ ಶಾಸಕ ಶ್ರೀಮಂತ ಪಾಟೀಲ್ ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿದ್ದೇಕೆ ಎಂಬ ಅನುಮಾನ ಎಲ್ಲರಲ್ಲಿ ಮನೆಮಾಡಿದೆ.