ನವದೆಹಲಿ, ಜು 18 (Daijiworld News/RD): ಕೊಲೆ ಹಾಗೂ ಅಪಹರಣ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶರವಣ ಭವನ ಗ್ರೂಫ್ ಆಫ್ ಹೋಟೆಲ್ ಮಾಲೀಕ ಪಿ.ರಾಜಗೋಪಾಲ್ ಜುಲೈ 9ರಂದು ಪೊಲೀಸರಿಗೆ ಶರಣಾಗಿದ್ದ ಇವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಗುರುವಾರ ಆಸ್ಪತ್ರೆಯಲ್ಲಿ ದಾಖಾಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
72 ವರ್ಷದ ಪಿ.ರಾಜಗೋಪಾಲ್, ೨೦೦೧ರಂದು ತನ್ನ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರ ಪ್ರಿನ್ಸ್ ಶಾಂತಕುಮಾರ್ ಅವರ ಪತ್ನಿ ಜೀವಜ್ಯೋತಿಯನ್ನು ತನ್ನ ಮೂರನೇ ಒಡತಿಯನ್ನಾಗಿ ಮಾಡಲು ಹಂಬಸಿ ಆಕೆಯ ಗಂಡನನ್ನು ಅಪಹರಿಸಿ, ಕೊಲೆ ಮಾಡಿದ್ದಾನೆ. ಈ ಕೊಲೆ ಪ್ರಕರಣದಲ್ಲಿ ರಾಜಗೋಪಾಲ್ ಹಾಗೂ ಇತರ ಎಂಟು ಮಂದಿಗೆ 10 ವರ್ಷಗಳ ಕಾಲ ಸ್ಥಳೀಯ ಕೋರ್ಟ್ ಶಿಕ್ಷೆ ವಿಧಿಸಿತ್ತು. ಬಳಿಕ ಐದು ವರ್ಷಗಳ ಹೆಚ್ಚುವರಿ ಶಿಕ್ಷೆಯನ್ನು ವಿಧಿಸಲಾಗಿತ್ತು. ಈ ಕೇಸ್ ಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆಯನ್ನು ಈತನಿಗೆ ವಿಧಿಸಿತ್ತು. ಸುಪ್ರೀಂಕೋರ್ಟ್ ಕೂಡ ಈ ತೀರ್ಪನ್ನು ಎತ್ತಿಹಿಡಿಯಲಾಗಿತ್ತು.
ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾದ ನಂತರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಾಲಾಗಿದ್ದ ಮಾಲಿಕ. ಪ್ರಕರಣಕ್ಕೆ ಸಂಬಂಧಿಸಿದಂತೆ 2009 ರಂದು ಸುಪ್ರೀಂಕೋರ್ಟ್ ಜಾಮೀನು ನೀಡಿತು
ಮೂಲಗಳ ಪ್ರಕಾರ ಕೋರ್ಟ್ ಆದೇಶದ ಮೇರೆಗೆ ಕಳೆದ ವಾರ ಶರಣಾಗಿದ್ದ ಪಿ ರಾಜಗೋಪಾಲ್ ಅನಾರೋಗ್ಯದ ಕಾರಣದಿಂದ ತನಗೆ ಶರಣಾಗಲು ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ನಲ್ಲಿ ಮನವಿ ಮಾಡಿದ್ದು, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ರಾಜಗೋಪಾಲ್ ಜುಲೈ 10 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.