ಶ್ರೀನಗರ, ಜು20(Daijiworld News/SS): ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.
ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಅವರು, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಜುಲೈ 26 ರಂದು ಕಾರ್ಗಿಲ್ ವಿಜಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಭಾರತೀಯ ಸೇನೆ ಈಗಾಗಲೇ ಸಿದ್ಧತೆ ನಡೆಸುತ್ತಿದೆ. ಇದರ ಭಾಗವಾಗಿ ಈ ದಿನದ ಪ್ರಾಮುಖ್ಯತೆಯನ್ನು ನೆನಪಿಸುವ ಜತೆಗೆ ಅಂದು ದೇಶರಕ್ಷಣೆಗಾಗಿ ಪ್ರಾಣ ಸಮರ್ಪಿಸಿದ ವೀರ ಯೋಧರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದ್ದಾರೆ.
ರಾಜನಾಥ್ ಸಿಂಗ್ ಒಂದು ದಿನದ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿದ್ದು, ಮೊದಲಿಗೆ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ, ಆ ನಂತರ ಅವರು ಜಮ್ಮುಗೆ ತೆರಳಿದ್ದು, ಸಾಂಬಾ ಜಿಲ್ಲೆಯ ಕಥುವಾ ಮತ್ತು ಬಸಂತಾರ್ನಲ್ಲಿ 2 ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.