ಬೆಂಗಳೂರು, ಜ. 26 (DaijiworldNews/ AK): ಮನರೇಗಾ ಯೋಜನೆಯ ಹೆಸರು ಬದಲಾವಣೆ ಹಾಗೂ ಯೋಜನೆಯಲ್ಲೂ ಸಾಕಷ್ಟು ಬದಲಾವಣೆ ಮಾಡಿರುವುದನ್ನ ಖಂಡಿಸಿ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯದಲ್ಲೂ ಬೃಹತ್ ಪ್ರತಿಭಟನೆ ನಾಳೆ ನಡೆಸಲಿದೆ.

ಎಲ್ಲಾ ಜಿಲ್ಲಾ ಕೇಂದ್ರ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಪ್ರತಿಭಟನೆ ಜೊತೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲೂ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.
ಕೇಂದ್ರ ಸರ್ಕಾರದ ನೂತನ ʻವಿಬಿ ಜಿ ರಾಮ್ ಜಿʼ ಯೋಜನೆ ಹಳೆಯ ಮನರೇಗಾ ಯೋಜನೇಯ ಸಂಪೂರ್ಣ ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಮುಂದಾಗಿದೆ. ನಾಳೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಬಳಿಕ ಮನರೇಗಾ ರದ್ದು ಖಂಡಿಸಿ, ಅಂದೇ ರಾಜಭವನ ಚಲೋ ಸಹ ಹಮ್ಮಿಕೊಳ್ಳಲಾಗಿದೆ. ಫ್ರೀಡಂ ಪಾರ್ಕ್ನಿಂದ ರಾಜಭವನ ಚಲೋ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕೈ ನಾಯಕರು ಮುಂದಾಗಿದ್ದಾರೆ