ಮುಂಬೈ, ಜ. 28 (DaijiworldNews/AK ): ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ.

ಪೈಲಟ್ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ. ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು
ಸ್ಥಳದಿಂದ ಬಂದ ದೃಶ್ಯಗಳಲ್ಲಿ ಬೆಂಕಿ ಮತ್ತು ಹೊಗೆ ದಟ್ಟವಾಗಿ ಆವರಿಸಿದೆ. ನಜ್ಜುಗುಜ್ಜಾದ ವಿಮಾನದ ಅವಶೇಷಗಳ ಮಧ್ಯೆ ದೇಹಗಳನ್ನು ಹೊರಕ್ಕೆ ತೆಗೆಯುತ್ತಿರುವ ದೃಶ್ಯಗಳು ಕಂಡುಬಂದಿವೆ. ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.