ಬೆಂಗಳೂರು, ಜು 23 (DaijiworldNews/SM): ವಿಧಾನಸಭೆಯಲ್ಲಿ ಕುಮಾರಸ್ವಾಮಿ ಬಹುಮತ ಸಾಬೀತುಪಡಿಸಲು ವಿಫಲರಾಗಿದ್ದು, ಇದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಗೊಳ್ಳಲಿದೆ. ಕಳೆದ 14 ತಿಂಗಳುಗಳ ಕಾಲ ರಾಜ್ಯದ ಜನತೆ ತಿರಸ್ಕರಿಸುವ ಆಡಳಿತವನ್ನು ಮೈತ್ರಿ ಸರಕಾರ ನೀಡಿತ್ತು. ಆದರೆ, ಮುಂದಿನ ದಿನಗಳಲ್ಲಿ ಶೇಕಡಾ 100ರಷ್ಟು ಅಭಿವೃದ್ಧಿಯ ಪರ್ವ ಆರಂಭಗೊಳ್ಳಲಿದೆ ಎಂದರು.
ರಾಜ್ಯದ ಜನತೆ ಬರದಿಂದ ಕಂಗೆಟ್ಟಿದ್ದಾರೆ. ಬರ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಮುಕ್ತಿಸಿಗಲಿದೆ ಎಂದಿದ್ದಾರೆ.