ಬೆಂಗಳೂರು, ಜು 25(Daijiworld News/MSP): ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಧಿಡೀರ್ ಆಗಿ ಕಾಂಗ್ರೆಸ್ ನಾಯಕ ರಾಮಲಿಂಗರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಲಕ್ಕಸಂದ್ರದಲ್ಲಿರುವ ರಾಮಲಿಂಗ ರೆಡ್ಡಿ ಮನೆಗೆ ಬೆಳ್ಳಂಬೆಳ್ಳಗೆ ಭೇಟಿ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅಲ್ಲೇ ಉಪಹಾರ ಸೇವಿಸಿದ್ದಾರೆ. ಮುಂದಿನ ರಾಜಕೀಯ ನಡೆ ಕಾರ್ಯತಂತ್ರದ ಬಗ್ಗೆ ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ಹಾಗೂ ಅವರ ಮಗಳು ಶಾಸಕಿ ಸೌಮ್ಯ ರೆಡ್ಡಿಯೊಂದಿಗೆ ಮಾತುಕತೆ ನಡೆಸಿದ್ದಾರೆ.
ರಾಮಲಿಂಗ ರೆಡ್ಡಿ ಅವರೊಂದಿಗೆ ಕುಮಾರಸ್ವಾಮಿ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸುತ್ತಿದ್ದು, ಅತೃಪ್ತ ಶಾಸಕರಿಗೆ ಗಾಳ ಹಾಕುವ ಕಾರ್ಯತಂತ್ರ ರೂಪಿಸಲು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.