ಬೆಂಗಳೂರು, ಜು 25 (Daijiworld News/SM): ರಾಜ್ಯದಲ್ಲಿನ ದೋಸ್ತಿ ಸರಕಾರ ಪತನವಾಗಲು ಕಾರಣರಾದ ಅತೃಪ್ತ ಶಾಸಕರ ಪೈಕಿ ಮೂವರು ಅನರ್ಹರಾಗಿದ್ದಾರೆ.
ರಾಣಿಬೆಣ್ಣೂರು ಕ್ಷೇತ್ರದ ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಅವರು ಅನರ್ಹಗೊಂಡಿದ್ದಾರೆ. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಮಹತ್ವದ ಆದೇಶ ನೀಡಿದ್ದಾರೆ.
ಒಟ್ಟು ಮೂರು ಶಾಸಕರು 15ನೇ ವಿಧಾನಸಭೆಯಿಂದ ಅನರ್ಹಗೊಂಡಿದ್ದಾರೆ. ಈ ಮೂರು ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ, ಹಾಲಿ ವಿಧಾನಸಭೆ ವಿಸರ್ಜನೆಯಾದರೆ ಮಾತ್ರ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದಾದ ಸಾಧ್ಯತೆ ಇದೆ. ಇಲ್ಲವಾದಲ್ಲಿ ಇವರು ಮೂವರು 2023ರ ತನಕ ಅನರ್ಹರಾಗಿದ್ದು, ವಿಧಾನಸಭೆ ಕಲಾಪಕ್ಕೆ ಹಾಜರಾಗುವಂತಿಲ್ಲ ಎಂದು ಸ್ಪೀಕರ್ ಆದೇಶ ನೀಡಿದ್ದಾರೆ.