ಬೆಂಗಳೂರು, ಜು 24 (Daijiworld News/SM): ದೋಸ್ತಿ ಸರಕಾರ ವಿರುದ್ಧ ಹೋಗಿ ಸರಕಾರ ಪತನಕ್ಕೆ ಕಾರಣರಾದ ಶಾಸಕರ ಪೈಕಿ ಮೂವರನ್ನು ಅನರ್ಹಗೊಳಿಸಲಾಗಿದ್ದು, ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಈಗಾಗಲೇ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಾಸಕರು ಮತ್ತೆ ಅರ್ಜಿ ಸಲ್ಲಿಸಿದರೆ ಅದರ ವಿಚಾರಣೆಯೂ ಆ ಅರ್ಜಿಗಳ ಜೊತೆಗೆ ನಡೆಯಲಿದೆ.
ಮೂವರು ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಹೊರಡಿಸಿದರು. ಗುರುವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ) ಮತ್ತು ಆರ್. ಶಂಕರ್ (ರಾಣೆಬೆನ್ನೂರು) ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದರು.
ಈ ಮೂವರು ಶಾಸಕರು 15ನೇ ವಿಧಾನಸಭೆ ಅವಧಿ ಮುಗಿಯುವ ತನಕ ಚುನಾವಣಾ ಕಣಕ್ಕಿಳಿಯುವಂತಿಲ್ಲ. ಮೂವರು ಶಾಸಕರು ಸ್ಪೀಕರ್ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ತೀರ್ಮಾನವನ್ನು ಕೈಗೊಂಡಿದ್ದಾರೆ.