ಬೆಂಗಳೂರು, ಜು26(Daijiworld News/SS): ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಿದ್ದು, ಹೊಸ ಸರ್ಕಾರ ರಚನೆಗೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭ, ಹೊಸ ಸರ್ಕಾರ ರಚಿಸಲು ಹೊರಟಿರುವ ಬಿಜೆಪಿ ಮುಂದಿರುವ ಸವಾಲುಗಳ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ರಾಜ್ಯ ರಾಜಕೀಯದ ಬಗ್ಗೆ ಮಾತನಾಡಿದ ಕೆಪಿಸಿಸಿ ಉಸ್ತುವಾರಿ ಕೆ. ಸಿ. ವೇಣುಗೋಪಾಲ್, ಸದ್ಯದ ರಾಜಕೀಯ ಅಸ್ಥಿರತೆಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಸರ್ಕಾರ ರಚನೆ ಮಾಡುವಷ್ಟು ಬಿಜೆಪಿಗೂ ಬೆಂಬಲವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆ ಮಾಡುವಷ್ಟು ಬಹುಮತ ಹೊಂದಿಲ್ಲ. ಅವರು ಬೇರೆ ಇನ್ನಾವುದಕ್ಕೂ ಕಾಯುವಂತಿದೆ. ಬಿಜೆಪಿಗೆ ಇರುವುದು ಕೇವಲ 150 ಸದಸ್ಯರ ಬಲ ಮಾತ್ರ. ಜಾರಿ ನಿರ್ದೇಶನಾಲಯ, ಸಿಬಿಐ ಮೂಲಕ ಎಲ್ಲರನ್ನು ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಹೇಳಿದರು.
ಹಣಬಲದಿಂದ ಅಧಿಕಾರ ಹಿಡಿಯಲು ವಾಮಮಾರ್ಗದಿಂದ ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಆಟ ಬಹಳ ದಿನಗಳ ಕಾಲ ನಡೆಯಲು ಸಾಧ್ಯವಿಲ್ಲ ಎಂದು ವೇಣುಗೋಪಾಲ್ ಹೇಳಿದರು.