ಬೆಂಗಳೂರು, ಜುಲೈ 27 (Daijiworld News/RD): ಮುಂಬೈನಲ್ಲಿ ನೆಲೆಸಿರುವ ಅತೃಪ್ತ ಶಾಸಕರಲ್ಲಿ ಕೆಲವರು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದಾರೆ ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಇಬ್ಬರು ಶಾಸಕರು ಕರೆ ಮಾಡಿ, ಅನರ್ಹತೆ ವಿಷಯವಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಅತೃಪ್ತ ಶಾಸಕರು ಯಾರು ಎಂಬುವುದರ ಬಗ್ಗೆ ಎಲ್ಲೂ ಹೇಳಿಕೊಂಡಿಲ್ಲಾ. ಕರೆ ಮಾಡಿದ ಶಾಸಕರು ಸಿದ್ದರಾಮಯ್ಯ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿರಬಹುದು ಎಂಬ ಅನುಮಾನ ಮೂಡಿದೆ.
ಸೋಮವಾರ ಬಹುಮತ ಸಾಬೀತು ಪಡಿಸಲು ಮುಂದಾಗಿರುವ ಮುಖ್ಯಮಂತ್ರಿ, ಮುಂದೆ ಅತೃಪ್ತ ಶಾಸಕರು ನಿರ್ಣಯ ಬದಲಿಸಿದರೆ ಯಡಿಯೂರಪ್ಪರಿಗೆ ಆತಂಕ ಎದುರಾಗಲಿದೆ.