ಬೆಂಗಳೂರು, ಜು 28 (Daijiworld News/MSP): ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಅತೃಪ್ತ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ರಾಜೀನಾಮೆ ವಿಚಾರವಾಗಿ ವಿಧಾನ ಸಭಾ ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಟಿ ನಡೆಸಿ, ರಾಜೀನಾಮೆ ನೀಡಿದ ಎಲ್ಲಾ 14 ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಕಾನೂನು ನಿಯಮಾವಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಎಸ್.ಟಿ. ಸೋಮಶೇಖರ್, ಮುನಿರತ್ನ, ಭೈರತಿ ಬಸವರಾಜ್, ಪ್ರತಾಪಗೌಡ ಪಾಟೀಲ್, ರೋಷನ್ ಬೇಗ್, ಎಂಟಿಬಿ ನಾಗರಾಜ್, ಸುಧಾಕರ್, ಬಿಸಿ ಪಾಟೀಲ್, ಶಿವರಾಂ ಹೆಬ್ಬಾರ್, ಗೋಪಾಲಯ್ಯ, ಶ್ರೀಮಂತ ಪಾಟೀಲ್,ನಾಗೇಂದ್ರ, ಆನಂದ್ ಸಿಂಗ್, ನಾರಯಣ ಗೌಡ, ಹೆಚ್ ವಿಶ್ವನಾಥ್ ರನ್ನು ಈ ವಿಧಾನ ಸಭಾ ಅವಧಿಗೆ ಅನರ್ಹಗೊಳಿಸಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ.