ಬೆಂಗಳೂರು, ಫೆ. 15 (DaijiworldNews/ AK): ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ ಏರಿಕೆ ಮಾಡಲಾಗಿದೆ. ನಾಳೆಯಿಂದ (ಫೆಬ್ರವರಿ 16) ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಡಿಸೇಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ ಲಗೇಜ್ ದರ ಏರಿಕೆಯಾಗಿತ್ತು. ಅದಾದ ಬಳಿಕ ಟಿಕೆಟ್ ದರ ಪರಿಷ್ಕ್ರರಣೆ ಆದಾಗ ಲಗೇಜ್ ದರ ಏರಿಕೆಯಾಗಿರಲಿಲ್ಲ. ಹೀಗಾಗಿ ಲಗೇಜ್ ಸಾಗಿರುವ ದರ ಹೆಚ್ಚಳ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
1 ರಿಂದ 5 ಸ್ಟೇಜ್ ವರೆಗೆ 6 ರೂಪಾಯಿ .
6 ರಿಂದ 12 ಸ್ಟೇಜ್ ವರೆಗೆ 12 ರೂಪಾಯಿ.
156 ರಿಂದ 160 ಸ್ಟೇಜ್ ವರೆಗೆ 145 ರೂಪಾಯಿ.
ಇನ್ನು ಕೆಲ ದಿನಗಳ ಹಿಂದೆ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಸುದ್ದಿ ಹಬ್ಬಿತ್ತು. ಬಳಿಕ ಎಚ್ಚೆತ್ತುಕೊಂಡ ಕೆಎಸ್ಆರ್ಟಿಸಿ, ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿತ್ತು.