ಗುವಾಹಟಿ, ಫೆ. 16 (DaijiworldNews/AA): ಹಿರಿಯ ನಾಯಕ ಮತ್ತು ಮಾಜಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಅವರು ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯುಂಟಾಗಿದೆ.

ಬೋರಾ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ಪತ್ರದಲ್ಲಿ, ಪಕ್ಷದ ನಾಯಕತ್ವವು ತಮ್ಮನ್ನು ನಿರ್ಲಕ್ಷಿಸಿದೆ ಮತ್ತು ರಾಜ್ಯ ಘಟಕದಲ್ಲಿ ಅವರಿಗೆ ಸರಿಯಾದ ಸ್ಥಾನ ನೀಡಿಲ್ಲ ಎಂದು ಅವರು ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಭೂಪೇನ್ ಬೋರಾ, "ಕಾಂಗ್ರೆಸ್ ಹೈಕಮಾಂಡ್ಗೆ ನನ್ನ ರಾಜೀನಾಮೆ ಕಳುಹಿಸಿದ್ದೇನೆ ಮತ್ತು ಈ ಹೆಜ್ಜೆ ಇಡಲು ನನಗೆ ಏಕೆ ಒತ್ತಾಯಿಸಲಾಯಿತು ಎಂಬುದನ್ನು ವಿವರವಾಗಿ ವಿವರಿಸಿದ್ದೇನೆ" ಎಂದು ತಿಳಿಸಿದ್ದಾರೆ.