ಬೆಂಗಳೂರು,ಫೆ. 17 (DaijiworldNews/AK): ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಆದೇಶ ಹೊರಡಿಸಿದ್ದಾರೆ.
ಇನ್ನು ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಸೂರಜ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಈ ಹಿನ್ನೆಲೆ ಸೂರಜ್ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿತ್ತು. ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.