ಬೆಂಗಳೂರು,ಫೆ. 19 (DaijiworldNews/AK): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಸಂದರ್ಭದಲ್ಲಿ 50 ವರ್ಷ ಸಕ್ರಿಯ ರಾಜಕಾರಣದಲ್ಲಿ ನಡೆದು ಬಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಯಿತು. ಕಾರ್ಯಕರ್ತರಿಂದ ಗೌರವ ಸಮರ್ಪಿಸಲಾಯಿತು. ಬಳಿಕ ಅಭಿನಂದನೆಗೆ ಉತ್ತರವಾಗಿ ಯಡಿಯೂರಪ್ಪ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಈ ಹಾಗೂ ಭ್ರಷ್ಟ ಸರಕಾರವನ್ನು ಕಿತ್ತೊಗೆದು ಅಭಿವೃದ್ಧಿಪರ ಬಿಜೆಪಿ ಸರಕಾರವನ್ನು ತರಲು ನೀವೆಲ್ಲರೂ ಸಿದ್ಧರಿದ್ದೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.