ನವದೆಹಲಿ, ಫೆ. 22 (DaijiworldNews/AA): ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಐಸಿಸ್, ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿರುವ 8 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಜೊತೆಗೆ ಮತ್ತಿಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಯೂ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್ಗಳು ಮತ್ತು 16 ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.