ಬೆಂಗಳೂರು,23 (DaijiworldNews/AK): ರಾಜ್ಯದ ಬಜೆಟ್ ಅಧಿವೇಶನದ ಸಂಬಂಧ ತಾವು ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಅವರು ಸದನವನ್ನು ಎದುರಿಸುವ ಕುರಿತು ಚರ್ಚಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಅವರು ಇಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಕಚೇರಿ ಸಂಖ್ಯೆ 160ರಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಜೆಟ್ ಅಧಿವೇಶನವು ಮಾರ್ಚ್ ಮೊದಲ ವಾರದಲ್ಲಿ ಆರಂಭ ಆಗಲಿದೆ ಎಂದು ಅವರು ತಿಳಿಸಿದರು.
ರಾಜಕೀಯ ವಿಚಾರಗಳು, ಸಂಘಟನಾತ್ಮಕ ವಿಷಯಗಳನ್ನು ಚರ್ಚೆ ಮಾಡಿರುವುದಾಗಿ ಹೇಳಿದರು.ಮುಖ್ಯಮಂತ್ರಿಗಳು ಘೋಷಿಸಿದಂತೆ, ಜೂನ್ನಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಕಾಂಗ್ರೆಸ್ ಸರಕಾರ ದೊಡ್ಡ ಮನಸ್ಸನ್ನು ಮಾಡಿದೆ. ಈ ಎಲ್ಲ ವಿಚಾರಗಳನ್ನು ಆರ್.ಅಶೋಕ್ ಅವರ ಜೊತೆ ಚರ್ಚಿಸಿದ್ದಾಗಿ ವಿವರಿಸಿದರು.