ಬೆಂಗಳೂರು,ಜೂ 30 (Daijiworld News/RD): ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ಇದೀಗ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯ ಆಚರಣೆಯನ್ನು ರದ್ದುಗೊಳಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯ ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಆಚರಣೆ ಮಾಡೇ ಮಾಡ್ತೆವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.
ಈ ಹಿಂದೆ ಕೊಡಗಿನಲ್ಲಿ ಟಿಪ್ಪು ಜಯಂತಿಯಿಂದ ಹಲವಾರು ಗಲಭೆಗಳು ಸೃಷ್ಠಿಯಾಗಿದ್ದು, ಈ ಕಾರಣದಿಂದಾಗಿ ಅಲ್ಲಿನ ಶಾಸಕ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಎಂದು ಆದೇಶ ಹೊರಡಿಸಿದ್ಧಾರೆ.
ಸಿಎಂನ ಈ ಆದೇಶಕ್ಕೆ ಸುದ್ದಿಗಾರರೊಂದಿಗೆ ಮತನಾಡಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಟಿಪ್ಪು ಜಯಂತಿಯನ್ನು ಬಿಜೆಪಿ ರದ್ದು ಮಾಡುತ್ತದೆ ಎಂದು ಗೊತ್ತಿತ್ತು. ಆದರೆ ಇಷ್ಟು ಬೇಗ ರದ್ದು ಮಾಡುತ್ತದೆ ಎಂದು ಗೊತ್ತಿರಲಿಲ್ಲ. ರದ್ದು ಪಡಿಸುವ ಪ್ರಕ್ರಿಯೆಗೆ ಕ್ಯಾಬಿನೆಟ್ನಲ್ಲಿ ನಿರ್ಧಾರ ಆಗಬೇಕು. ಆ ನಿರ್ಧಾರದ ಮೇಲೆ ರದ್ದು ಪಡಿಸಬೇಕಾಗುತ್ತದೆ ಆದರೆ ಇವರು ಹೇಗೆ ರದ್ದು ಪಡಿಸಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.