ಚಿಕ್ಕಮಗಳೂರು, ಜು 31 (DaijiworldNews/SM): ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಸಿದ್ದಾರ್ಥ್ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಚಿಕ್ಕಮಗಳೂರಿನ ಚೇತನಹಳ್ಳಿಯಲ್ಲಿ ನೆರವೇರಿಸಲಾಯಿತು.
ಸಿದ್ದಾರ್ಥ ಅವರ ಚಿತೆಗೆ ಪುತ್ರರು ಅಗ್ನಿ ಸ್ಪರ್ಶ ಮಾಡಿದರು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಇನ್ನು ಚೇತನಹಳ್ಳಿಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದರು.
ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ದಾರ್ಥ ಅವರು ಸೋಮವಾರ ರಾತ್ರಿ ಮಂಗಳೂರಿನ ನೇತ್ರಾವತಿ ನದಿ ಸೇತುವೆಯ ಬಳಿ ನಾಪತ್ತೆಯಾಗಿದ್ದರು. ನಿರಂತರ ಶೋಧ ಕಾರ್ಯದ ಬಳಿಕ ಬುಧವಾರ ಬೆಳಗ್ಗೆ ಸಿದ್ದಾರ್ಥ ಅವರ ಮೃತದೇಹ ಹೊಯಿಗ್ ಬಜಾರ್ ಎಂಬ ಪ್ರದೇಶದ ಪತ್ತೆಯಾಗಿತ್ತು.
ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ವಿ.ಜಿ ಸಿದ್ದಾರ್ಥ ಮೃತದೇಹ ಪತ್ತೆ, ನೇತ್ರಾವತಿ ಪಾಲಾದ ಕಾಫಿ ಕಿಂಗ್ ಸ್ಥಳೀಯ ಮೀನುಗಾರರು ಗಮನಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿರಂತರ 36 ಗಂಟೆಗಳ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದ್ದಾರೆ.