ಬೆಂಗಳೂರು, ಜು 31 (DaijiworldNews/SM): ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವಿಚಾರಣೆ ತೀವ್ರಗೊಳಿಸಲಾಗಿದೆ. ಈಗಾಗಲೇ ರೋಷನ್ ಬೇಗ್ ಅವರನ್ನು ವಿಚಾರಣೆ ನಡೆಸಲಾಗಿದೆ. ಇದೀಗ ಮಾಜಿ ಸಚಿವ ಜಮೀರ್ ಅಹಮ್ಮದ್ ಅವರ ಸರದಿ. ಜಮೀರ್ ಅಹಮ್ಮದ್ ಅವರನ್ನು ಎಸ್ ಐಟಿ ಅಧಿಕಾರಿಗಳು ಸತತ ಎಂಟು ಗಂಟೆಗಳ ಕಾಲ ವಿಚಾರಣೆಗೊಳಪಡೀಸಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಯಿಂದ ಸತತವಾಗಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಜಮೀರ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಎಸ್ಐಟಿ ಕಚೇರಿಗೆ ಕರೆಸಿಕೊಂಡಿದ್ದೇವೆ. ವಿಚಾರಣೆ ಇನ್ನೂ ನಡೆಯುತ್ತಿದ್ದು, ಇನ್ನೂ ತಡವಾಗುವ ಸಾಧ್ಯತೆಯಿದೆ. ಎಂದು ಈಗಾಗಲೇ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ವಿಚಾರಣೆ ವೇಳೆ ಜಮೀರ್ ಅವರು ಕೆಲ ಕಾಲ ತಮ್ಮ ವಕೀಲರನ್ನು ಕರೆಸಿಕೊಂಡಿದ್ದರು. ಬಳಿಕ ಅವರನ್ನು ಹೊರಗೆ ಕಳುಹಿಸಲಾಗಿದೆ. ಪ್ರಕರಣದ ಪ್ರಮುಖ ರೂವಾರಿ ಮನ್ಸೂರ್ ಖಾನ್, ಜಮೀರ್ ಮಾತನಾಡಿರುವ ವಿಡಿಯೋ ತೋರಿಸಿದ್ದಕ್ಕೆ ಉತ್ತರಿಸಿದ ಜಮೀರ್, ಮನ್ಸೂರ್ ಜೊತೆ ಎರಡು ಮೂರು ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಆದರೆ, ನಾನು ಯಾವುದೇ ಅವ್ಯವಹಾರವನ್ನು ಹೊಂದಿಲ್ಲ. ನನಗೆ ಕೋಟ್ಯಂತರ ರೂಪಾಯಿ ಆಸ್ತಿಯಿದೆ ಎಂದು ಸ್ಪಷ್ಟಪಡಿಸಿದ್ದಾರೆ.