ನವದೆಹಲಿ, ಆ 01 (Daijiworld News/SM): ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಕೇಂದ್ರ ಸರಕಾರ ನಿರಂತರ ಟೀಕೆಗೆ ಗುರಿಯಾಗಿದೆ. ಆದರೆ, ಇದೀಗ ಕೇಂದ್ರ ಸರಕಾರ ಇದಕ್ಕೆ ಉತ್ತರ ನೀಡಿದೆ. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕಾನೂನು ಚುನಾಯಿತ ಜನಪ್ರತಿನಿಧಿಗಳಾದ ಶಾಸಕರು, ಸಂಸತ್ ಸದಸ್ಯರಿಂದ ಹೊರತಾಗಿಲ್ಲ ಎಂದಿದ್ದಾರೆ.
ಲೋಕಸಭೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಮಸೂದೆ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ, ಅತ್ಯಾಚಾರ ಪ್ರಕರಣದಿಂದ ಯಾರಿಗೂ ವಿನಾಯಿತಿ ನೀಡಿಲ್ಲ. ಚುನಾಯಿತ ಶಾಸಕರು ಮತ್ತು ಸಂಸದರಿಗೆ ಈ ಕಾನೂನಿ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಮಹಿಳಾ ಸದಸ್ಯರೊಬ್ಬರು ಎತ್ತಿದ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, ಉನ್ನಾವ್ ಅತ್ಯಾಚಾರ ಪ್ರಕರಣದ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ಸಂಸದರ ನಡೆಯನ್ನು ಅವರು ಟೀಕಿಸಿದರು.